ಕ್ಯಾಡ್‌ನೆಸ್ಟ್ ಸಂಸ್ಥೆಯಲ್ಲಿ ಗ್ರಾಫಿಕ್ ಡಿಸೈನ್ ಸೇರಿದಂತೆ ವಿವಿಧ ಡಿಸೈನ್ ಕೌಶಲ ಕಲಿತ ವಿದ್ಯಾರ್ಥಿಗಳಿಗೆ ಅಪೂರ್ವ ಅವಕಾಶವೊಂದು ಇಲ್ಲಿದೆ. ಡಿಸೈನಿಂಗ್ ಕುರಿತು ಆಸಕ್ತಿ ಇರುವ ಇತರೆ ವಿದ್ಯಾರ್ಥಿಗಳಿಗೂ ಇದು ಉತ್ತಮ ಅವಕಾಶ. ಕ್ಯಾಡ್‌ನೆಸ್ಟ್‌ನ ಕ್ರಿಯಾಶೀಲ, ಅತ್ಯುತ್ತಮ ಐಡಿಯಾಗಳಿರುವ ವಿದ್ಯಾರ್ಥಿಗಳು ಕರ್ನಾಟಕ ಸರಕಾರದ ನಮ್ಮ ಕ್ಲಿನಿಕ್ಸ್ ಲೋಗೊ ಡಿಸೈನ್ ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು. ಈ ಕುರಿತು ಹೆಚ್ಚಿನ ವಿವರ ಇಲ್ಲಿದೆ. ಕ್ರಿಯಾಶೀಲ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್- ಪ್ರಕಾಶ್ ಗೌಡ ಎಚ್.ಎಂ., ವ್ಯವಸ್ಥಾಪಕ ನಿರ್ದೇಶಕರು, ಕ್ಯಾಡ್‌ನೆಸ್ಟ್
ರಾಜ್ಯದ ಜನತೆಯ ಆರೋಗ್ಯ ಸೇವೆಗೆ ರಾಜ್ಯ ಸರ್ಕಾರ ಶ್ರೀಘ್ರದಲ್ಲೇ ನಮ್ಮ ಕ್ಲಿನಿಕ್ ಅನ್ನು ಆರಂಭ ಮಾಡಲಿದೆ. ಆದರೆ ಅದಕ್ಕೂ ಮುನ್ನವೇ ನಮ್ಮ ಕ್ಲಿನಿಕ್ ಜೊತೆ ಕೈ ಜೋಡಿಸಲು ಆರೋಗ್ಯ ಇಲಾಖೆ ಸುವರ್ಣಾವಕಾಶ ಮಾಡಿಕೊಟ್ಟಿದೆ. ಸರ್ಕಾರವು ‘ನಮ್ಮ ಕ್ಲಿನಿಕ್”ಗೆ ವಿಶಿಷ್ಟವಾದ ಗುರುತನ್ನು ಎದುರು ನೋಡುತ್ತಿದೆ. ಸೃಜನಾತ್ಮಕ ಮತ್ತು ನವೀನ ಲೋಗೋ ವಿನ್ಯಾಸ ಮಾಡಲು ರಾಜ್ಯದ ಜನತೆ ಅವಕಾಶವಿದೆ. ನಮ್ಮ ಕ್ಲಿನಿಕ್‌ನ ವಿಭಿನ್ನ ಮತ್ತು ಆಕರ್ಷಕ ಗುರುತು ಹೇಗಿರಬೇಕು ಅನ್ನುವುದನ್ನು ನೀವು ನಿರ್ಧಾರ ಮಾಡಲು ಅವಕಾಶವಿದೆ.
ರಾಜ್ಯದಲ್ಲಿ ಸುಮಾರು 436 ಕಡೆಗಳಲ್ಲಿ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿವೆ. ಇದು ರಾಜ್ಯದ ಆರೋಗ್ಯ ವ್ಯವಸ್ಥೆಗೆ ಹೊಸ ಸ್ಪರ್ಶವನ್ನು ತಂದು ಕೊಡಲಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ನಗರ ಪ್ರದೇಶಗಳಲ್ಲಿ ನಮ್ಮ ಕ್ಲಿನಿಕ್ ಕಾರ್ಯಾರಂಭ ಮಾಡಲಿದೆ.
ಆಡಳಿತ ಮತ್ತು ಅಭಿವೃದ್ಧಿಯಲ್ಲಿ ರಾಜ್ಯದ ಜನತೆಯ ಸಕ್ರಿಯ ಭಾಗವಹಿಸುವಿಕೆಯನ್ನು ಸರ್ಕಾರ ನಿರೀಕ್ಷೆ ಮಾಡುತ್ತಿದೆ. ಸರ್ಕಾರದ ಮತ್ತು ಆರೋಗ್ಯ ಇಲಾಖೆಯ ಉದ್ದೇಶವನ್ನು ಬಿಂಬಿಸುವಂತೆ ಆಕರ್ಷಕ ಲೋಗೋ ವಿನ್ಯಾಸ ಮಾಡಿ logo4nammaclinic@gmail.com ಕಳುಹಿಸಬೇಕು. ಆಯ್ಕೆಯಾದ ವಿನ್ಯಾಸವನ್ನು ಡಿಸೈನ್ ಮಾಡಿದವರಿಗೆ ಮಾನ್ಯ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಂದ ವಿಶೇಷ ವೈಯಕ್ತಿಕ ಗೌರವ ಸಿಗಲಿವೆ. ಆಗಸ್ಟ್ 5ರಿಂದ ಆಗಸ್ಟ್ 15ರ ಒಳಗೆ ಲೊಗೋ ವಿನ್ಯಾಸ ಕಳುಹಿಸುವಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.